ಕೋಮುಗಲಭೆ ಹುಟ್ಟುಹಾಕಿ ವೋಟ್ ಬ್ಯಾಂಕ್ ಗಟ್ಟಿಯಾಗಿ ಇಟ್ಟಿಕೊಳ್ಳಲು ಜಮೀರ್ ಮುಂದಾಗಿದ್ದಾರೆ : ಸಿ.ಟಿ.ರವಿ.

80
firstsuddi

ಚಿಕ್ಕಮಗಳೂರು : ಹುಬ್ಬಳ್ಳಿ ಗಲಭೆಯಲ್ಲಿ ಬಂಧಿತ ಆರೋಪಿಗಳ ಕುಟುಂಬಸ್ಥರಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಸಹಾಯ ಹಸ್ತ ಚಾಚಲು ಮುಂದಾಗಿದ್ದು, ಈ ಬಗ್ಗೆ ಸಿ.ಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ಡಿಜೆಹಳ್ಳಿ-ಕೆಜೆಹಳ್ಳಿ, ಪಾದರಾಯನಪುರದಲ್ಲಿ ನಡೆದ ಗಲಭೆ ಹಿಂದೆ ಕಾಂಗ್ರೆಸ್ ಪಾತ್ರವಿತ್ತು. ಅವರಿಗೆ ಹಣ, ವಕೀಲರ ನೇಮಕ ಎಲ್ಲ ಮಾಡಿದ್ದು ಕಾಂಗ್ರೆಸ್, ಆ ಸಂದರ್ಭದಲ್ಲಿ ಕೂಡ ಜಮೀರ್ ಹೆಸರು ಕೇಳಿ ಬಂದಿತ್ತು. ಈಗ ಹುಬ್ಬಳ್ಳಿ ಪ್ರಕರಣದಲ್ಲೂ ಜಮೀರ್ ಹೆಸರು ಕೇಳಿ ಬರುತ್ತಿದೆ ಎಂದರು.

ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಮಾಡುತ್ತಿದ್ದಾರೆ. ಕೋಮುಗಲಭೆ ಹುಟ್ಟುಹಾಕಿ ವೋಟ್ ಬ್ಯಾಂಕ್ ಗಟ್ಟಿಯಾಗಿ ಇಟ್ಟಿಕೊಳ್ಳಲು ಮುಂದಾಗಿದ್ದಾರೆ. ಅವರಿಗೆ ನೆರವು ಕೊಡುವ ಪಾತ್ರ ಕಾಂಗ್ರೆಸ್ ನದ್ದು ಇರಬಹುದು ಎಂಬ ಅನುಮಾನಕ್ಕೆ ಸಾಕ್ಷಿ ಒದಗಿಸುವ ರೀತಿ ಜಮೀರ್, ಕಾಂಗ್ರೆಸ್ ನಡುವಳಿಕೆ ಇದೆ. ಹಿಜಾಬ್ ಹಿಂದೆ ಪಿಎಫೈ ಒಂದೇ ಅಲ್ಲ ಕಾಂಗ್ರೆಸ್ ಇದೆ ಎನ್ನುವ ಅನುಮಾನವಿತ್ತು. ಆಗ ಜಾತ್ಯಾತಿತಕ್ಕೆ ಚಾಂಪಿಯನ್ ಎನಿಸಿಕೊಂಡವರು ಹಿಜಬ್ ಪರ ನಿಂತರು. ವಕೀಲರಿಗೆ ನೆರವು ಕೊಟ್ಟಿದ್ದು ಕಾಂಗ್ರೆಸ್, ಅವರೆಲ್ಲಾ ಐದು – ಹತ್ತು ಸಾವಿರಕ್ಕೆ ಬರುವ ವಕೀಲರಲ್ಲ. ಎದ್ದು ನಿಂತರೆ 50 ಲಕ್ಷ ಬಿಲ್ ಮಾಡುತ್ತಾರೆ. ಅವರೆಲ್ಲಾ ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದ ವಕೀಲರಾಗಿದ್ದಾರೆ. ಹಿಜಬ್, ಪಾದರಾಯನಪುರ, ಡಿಜೆಹಳ್ಳಿ-ಕೆಜೆಹಳ್ಳಿ, ಹುಬ್ಬಳ್ಳಿ ಪ್ರಕರಣದಲ್ಲಿ ಕಾಂಗ್ರೆಸ್ ಪಾತ್ರ ಇರುವುದು ಸ್ಪಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.

ತಾನು ಕಳ್ಳನ ಪರ ಎಂಬ ಮಾತು ಕಾಂಗ್ರೆಸ್ ಗೆ ಅನ್ವಯವಾಗುತ್ತದೆ. ತಿಪ್ಪೆ ಸಾರಿಸುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು, ಬಿಜೆಪಿಯೂ ಹಾಗೇ ಎಂದು ಭಾವಿಸಿದ್ದಾರೆ. ಬಿಜೆಪಿ ತಿಪ್ಪೆ ಸಾರಿಸುವುದಾಗಿದ್ದರೆ ದಿವ್ಯಾ ಹಾಗರಗಿ ಮೇಲೆ ಎಫ್ಐಆರ್ ಆಗುತ್ತಿರಲಿಲ್ಲ. ಎಫ್ಐಆರ್ ಮಾಡುವುದರ ಜೊತೆಗೆ, ಸಿಐಡಿಗೆ ವಹಿಸಿ, ಆಕೆಯ ಗಂಡನನ್ನು, ಪ್ರಕರಣದಲ್ಲಿರುವ ಎಲ್ಲರನ್ನು ಬಿಜೆಪಿ ಸರ್ಕಾರ ಬಂಧಿಸಿದೆ. ಬಂಧನವಾಗದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತೇವೆ ಅಂತ ಹೇಳಿದ್ದು ಬಿಜೆಪಿ, ಯುಪಿ ಮಾದರಿಯಲ್ಲಿ ಕ್ರಮಕೈಗೊಳ್ಳುತ್ತೇವೆ ಎಂದು ಪೇಪರ್ ನೋಟಿಫಿಕೇಶನ್ ಕೊಟ್ಟಿದ್ದು ಬಿಜೆಪಿ ಎಂದು ಹೇಳಿದ್ದಾರೆ.