ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಆಚೆ ಬಂದಿದ್ದ ಬಿಜೆಪಿ ಶಾಸಕ ಮುನಿರತ್ನ ಇದೀಗ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಜೈಲು ಪಾಲಾಗಿದ್ದಾರೆ. ಎಸ್‍ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಮುನಿರತ್ನಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ಎಸ್‍ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಗುತ್ತಿಗೆದಾರನಿಗೆ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಆಚೆ ಬಂದಿದ್ದ ಬಿಜೆಪಿ ಶಾಸಕ ಮುನಿರತ್ನ ಇದೀಗ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಜೈಲು ಪಾಲಾಗಿದ್ದಾರೆ. ಎಸ್‍ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಮುನಿರತ್ನಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.










