ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಖಚಿತ, ವರುಣಾದಲ್ಲಿ ನಾನೇ ಸ್ಪರ್ಧಿಸ್ತೀನಿ : ಶಾಸಕ ಯತೀಂದ್ರ.

59
firstsuddi

ಮೈಸೂರು : ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧೆ ಮಾಡುವುದು ಖಚಿತ. ಹಾಗಾಗಿ ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ತಂದೆಯವರು ಕೋಲಾರದಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ. ಹೀಗಾಗಿ ನಾನು ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿ ಮುಂದುವರಿಯುವೆ. ವರುಣಾ ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆ. ವರುಣಾ ಕ್ಷೇತ್ರ ರಚನೆ ಆದಾಗಿನಿಂದಲೂ ಇಲ್ಲಿ ಕಾಂಗ್ರೆಸ್ ಪಕ್ಷವೇ ಗೆದ್ದಿರೋದು. ಬಿಜೆಪಿಯಿಂದ ಯಾರೇ ಬಂದರೂ ನಮಗೆ ಭಯವಿಲ್ಲ. ಎಲ್ಲರೂ ಸಹ ಗೆಲ್ಲಬೇಕೆಂದು ಸ್ಟಾಟರ್ಜಿ ಮಾಡ್ತಾರೆ. ಅಂತಿಮವಾಗಿ ವರುಣಾ ಕ್ಷೇತ್ರದಲ್ಲಿ ನಾವೇ ಗೆಲ್ಲೋದು ಎಂದು ಹೇಳಿದ್ದಾರೆ.