ಕೋಲಾರ : ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಹೆಚ್ಚಾಗಿದ್ದು, ಎಸ್.ಎನ್.ಆರ್ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಕೋವಿಡ್ ದೃಡವಾದ ಹಿನ್ನಲೆ ಆಸ್ಪತ್ರಗೆ ದಾಖಲಾದ ಸೋಂಕಿತರು ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ರಾತ್ರಿ ಆಕ್ಸಿಜನ್ ಕೊರತೆಯಿಂದಾಗಿ ಮೂವರು ಪುರುಷರು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ರಾತ್ರಿಯಿಂದ ಆಸ್ಪತ್ರೆಯ ವೈದ್ಯರಿಗೆ, ಅಧಿಕಾರಿಗಳಿಗೆ ಫೋನ್ ಮಾಡಿದರೂ ಯಾರೊಬ್ಬರೂ ಕೂಡ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಮೃತರ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.










