ಕೋಲಾರ: ಮದ್ಯದ ಅಮಲಿನಲ್ಲಿ ಹಾವನ್ನು ಕಚ್ಚಿ ಕೊಂದ ಕಿರಾತಕ…

159

ಕೋಲಾರ: ಕುಡಿದ ಮತ್ತಿನಲ್ಲಿ ಭೂಪನೊಬ್ಬ ಹಾವನ್ನು ಬಾಯಿಂದ ಕಚ್ಚಿ ಸಾಯಿಸಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ  ನಡೆದಿದೆ. ಮಷ್ಟೂರು ಗ್ರಾಮದ ಕುಮಾರ್ ಹಾವನ್ನು ಸಾಯಿಸಿದ ಭೂಪ. ನಶೆಯಲ್ಲಿದ್ದ ಕುಡುಕ ದಾರಿಯಲ್ಲಿ ಹೋಗುತ್ತಿದ್ದ ಹಾವನ್ನು ಹಿಡಿದು ಕತ್ತಿಗೆ ಸುತ್ತಿಕೊಂಡು ಗ್ರಾಮ ಪ್ರವೇಶಿಸಿದ್ದಾನೆ. ಗ್ರಾಮದ ಮಧ್ಯೆ ಬರುತ್ತಿದ್ದಂತೆ ಕುತ್ತಿಗೆ ಹಾವನ್ನು ಬಾಯಿಂದ ಕಚ್ಚಿ ಸಾಯಿಸಿದ್ದಾನೆ. ಕುಮಾರ್ ಹಾವನ್ನು ಕಚ್ಚಿ ಸಾಯಿಸುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆಹಿಡಿದುಕೊಂಡಿದ್ದಾರೆ. ಆದರೆ ಭಯದಿಂದ ಯಾರು ಕುಮಾರ್ ನನ್ನು ತಡೆಯಲು ಮುಂದಾಗಿಲ್ಲ. ಹಾವು ಸಾಯಿಸಿದ ಬಳಿಕ ಕುಮಾರ್ ಆರೋಗ್ಯವಾಗಿದ್ದು, ಗ್ರಾಮದಲ್ಲಿ ಓಡಾಡಿಕೊಂಡಿದ್ದಾನೆ. ಹಾವನ್ನು ಸಾಯಿಸಿದ್ದಕ್ಕೆ ಗ್ರಾಮಸ್ಥರು ಸಹ ಕ್ಲಾಸ್ ತೆಗೆದುಕೊಂಡಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.