ಕೋಳಿ ಅಂಗಡಿಗೆ ನುಗ್ಗಿದ ಲಾರಿ – ಇಬ್ಬರ ದುರ್ಮರಣ…

82
firstsuddi

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕೋಳಿ ಅಂಗಡಿಗೆ ನುಗ್ಗಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ಮರಳಿಗ ಗ್ರಾಮದಲ್ಲಿ ನಡೆದಿದೆ.

ಕೀಳಘಟ್ಟ ಗ್ರಾಮದ ಗಿರೀಶ್ ಶೆಟ್ಟಿ(50) ಹಾಗೂ ಎನ್. ಕೋಡಿಹಳ್ಳಿ ಗ್ರಾಮದ ಲೋಕೇಶ್ (44) ಮೃತ ದುರ್ದೈವಿಗಳು. ಇಬ್ಬರು ಅಂಗಡಿಯಲ್ಲಿ ಕುಳಿತಿದ್ದಾಗ ಈ ದುರ್ಘಟನೆ ನಡೆದಿದೆ. ಗಿರೀಶ್ ಶೆಟ್ಟಿ ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ಲೋಕೇಶ್ ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ಇನ್ನು ಕೋಳಿ ಅಂಗಡಿಯ ಮಾಲೀಕ ನಿಂಗೇಗೌಡಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

 ಬೆಸಗರಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಬೆಸಗರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.