ಬೆಂಗಳೂರು : ಸ್ಯಾಂಡಲ್ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಾಳೆ ತಮ್ಮ 47ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಮಹಾಮಾರಿ ಕೊರೊನಾ ವೈರಸ್ ಕಾರಣದಿಂದಾಗಿ ಈ ಬಾರಿ ನಾನು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ತಮ್ಮ ಇನ್ಸ್ಟಾಗ್ರಾಮ್ ಮೂಲಕ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ.
ಬಹಳ ವರ್ಷಗಳಿಂದ ನಿಮ್ಮನ್ನೆಲ್ಲಾ ಭೇಟಿಯಾಗುವುದು ಒಂದು ಸಂಸ್ಕೃತಿಯಂತಾಗಿದೆ ಹಾಗು ಬೇರೆ ಯಾವುದೇ ಸಂತೋಷ ಅದನ್ನು ಬದಲಾಯಿಸಲು ಆಗದು ಶುಭಾಶಯ ಕೋರಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದ ನಿಮ್ಮೊಂದಿಗೆ ಒಂದು ದಿನ ಪೂರ್ತಿ ಸಮಯ ಕಳೆಯುವ ಅವಕಾಶ ನನಗೆ ಸಿಗುತ್ತಿತ್ತು.
ಸದ್ಯದ ಪರಿಸ್ಥಿತಿ ಅನುಮತಿಸುತ್ತಿಲ್ಲ ಅಥವ ಬೆಂಬಲಿಸುತ್ತಿಲ್ಲ. ನಿಮ್ಮೆಲ್ಲರನ್ನೂ ಭೇಟಿಯಾಗಲು ಯಾವುದೇ ಆಚರಣೆ ಅಥವಾ ಯಾವುದೇ ಕಾರ್ಯಕ್ರಮ ಇರುವುದಿಲ್ಲ ಎಂದು ಹೇಳಲು ನಾನು ವಿಷಾದಿಸುತ್ತೇನೆ. ನಾನು ನಿಮ್ಮೆಲ್ಲರ ಹಾಗು ನನ್ನ ವಯಸ್ಸಾಗುತ್ತಿರುವ ಹೆತ್ತವರ ಆರೋಗ್ಯವನ್ನು ಗಮನದಲ್ಲಿಟ್ಟುಕೊಳ್ಳಬೇಕಾಗುತ್ತೆ. ಬೃಹತ್ ಒಟ್ಟುಗೂಡುವಿಕೆ ಅಂದರೆ, 10 ಹೆಜ್ಜೆ ಹಿಂದಿಟ್ಟು ಯಾವುದನ್ನು ತೊಲಗಿಸಲು ಪ್ರಯತ್ನಿಸುತ್ತಿದ್ದೇವೋ ಅದನ್ನು ಮತ್ತೆ ಆಮಂತ್ರಿಸಿದಂತೆ. ಕೋವಿಡ್ ಇನ್ನೂ ದೊಡ್ಡ ಬೆದರಿಕೆಯಾಗಿಯೇ ಇದೆ ಮತ್ತು ನಾವೆಲ್ಲರೂ ಕುಟುಂಬಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ನಿಮ್ಮ ಜನ ನನ್ನ ಜನ ಕೂಡ ಹೌದು ಹಾಗು ಜನಗಳು ಪೀಡಿತರಾಗುವ ಹಾಗು ನರಳುವ ಸುದ್ದಿ ಕೇಳಿದರೆ ಸಮವಾಗಿ ನನಗೂ ನೋವುಂಟುಮಾಡುತ್ತದೆ.
ನಿಮ್ಮ ಶುಭಾಶಯಗಳು ನನಗೆ ಮುಖ್ಯವಾದದ್ದೇ ಹಾಗು ನಾನು ಹೇಳಿದಂತೆ ಬೃಹತ್ ಸಂಖ್ಯೆಯಲ್ಲಿ ಬರುವ ನಿಮ್ಮನ್ನು ಕಾಣುವ ಸಂತೋಷ ಬೇರೆ ಯಾವುದೂ ಅದನ್ನು ಬದಲಾಯಿಸಲು ಆಗದು. ನಾನು ಖಚಿತವಾಗಿ ಹೇಳುತ್ತೇನೆ ಬಹಳ ಬೇಗ ಆ ದಿನವೂ ಬರುತ್ತದೆ ಹಾಗು ನಾವು ಮತ್ತೆ ಭೇಟಿಯಾಗುತ್ತೇವೆ. ಆದರೆ ಸದ್ಯಕ್ಕೆ, ನಿಮ್ಮಲ್ಲಿ ಕೋರುವುದೇನೆಂದರೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಎಲ್ಲೂ ಒಟ್ಟುಗೂಡಬೇಡಿ ಯಾವುದೇ ಸಂಭ್ರಮಾಚರಣೆ ಹಾಗು ಕಾರ್ಯಕ್ರಮಗಳು ಇರುವುದಿಲ್ಲ.
ಹೌದು,ಸಾಧ್ಯವಾದರೆ, ನಿಮ್ಮ ಸುತ್ತಮುತ್ತಲಿನ ಪ್ರದೇಶದ ಕೆಲವರಿಗೆ ಯಾವುದಾದರೂ ರೀತಿಯಲ್ಲಿ ಸಹಾಯ ಮಾಡಿ. ಅದು ನಿಮಗೆ ಒಳ್ಳೆಯದನ್ನು ಮಾತ್ರ ಮಾಡುತ್ತದೆ.
ಈ ಅನೇಕ ವರ್ಷಗಳು ನನ್ನ ಪರವಾಗಿ ನಿಂತಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು. ಒಂದೊಂದು ಸಲ ನಿಮ್ಮ ನಿರೀಕ್ಷೆಗಳಿಗೆ ನಾನು ಇರಲಿಲ್ಲ ನಾನು ಖಂಡಿತವಾಗಿಯೂ ನನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತೇನೆ, ಅದಕ್ಕೆ ತಕ್ಕಂತೆ ಇರಲು ನಿಮ್ಮನ್ನೆಲ್ಲಾ ಹೆಚ್ಚು ಮನೋರಂಜಿಸಲು ಮತ್ತೆ ಕೋವಿಡ್ನೊಂದಿಗಿನ ಈ ಇಡೀ ಯುದ್ಧವು ಮುಗಿದ ನಂತರ ನಿಮ್ಮೊಂದಿಗೆ ಹೆಚ್ಚು ಸಮಯ ಕಳೆಯಲು ಯತ್ನಿಸುವೆ ಎಂದು ಬರೆದುಕೊಂಡಿದ್ದಾರೆ.










