ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 5 ಸಾವಿರ ರೂ. ಪಿಂಚಣಿ : ಮಧ್ಯ ಪ್ರದೇಶ ಸಿಎಂ ಘೋಷಣೆ…

120
firstsuddi

ಭೋಪಾಲ್ : ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 5 ಸಾವಿರ ರೂ. ಪಿಂಚಣಿ ನೀಡಲಾಗುತ್ತದೆ ಎಂದು ಮಧ್ಯ ಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಘೋಷಣೆ ಮಾಡಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 5 ಸಾವಿರ ರೂ ಪಿಂಚಣಿ ನೀಡಲಾಗುತ್ತದೆ. ಅಲ್ಲದೇ ಇಂತಹ ಮಕ್ಕಳಿಗೆ ಸರ್ಕಾರವೇ ಉಚಿತ ಶಿಕ್ಷಣ ಮತ್ತು ಉಚಿತ ಪಡಿತರ ನೀಡಲಿದೆ. ಕೆಲಸ ಮಾಡಲು ಬಯಸುವ ಜನರಿಗೆ ಸರ್ಕಾರದ ಖಾತರಿಯ ಮೇಲೆ ಬಡ್ಡಿ ಇಲ್ಲದೆ ಸಾಲವನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.