ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ, ಕೇಂದ್ರ ಸರ್ಕಾರದಿಂದ 50 ಸಾವಿರ ಪರಿಹಾರ : ಕಂದಾಯ ಸಚಿವ ಆರ್.ಅಶೋಕ್.

68
firstsuddi

ಬೆಂಗಳೂರು : ವಿಧಾನಸೌಧದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಅವರು ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ ರೂ. ಹಾಗೂ ಕೇಂದ್ರ ಸರ್ಕಾರದಿಂದ 50 ಸಾವಿರ ರೂ.ಪರಿಹಾರ ನೀಡಲಾಗುವುದು ಎಂದರು.

ರಾಜ್ಯ ಸರ್ಕಾರದಿಂದ 1 ಲಕ್ಷ ರೂಪಾಯಿ, ಈ ಪರಿಹಾರ ಬಿಪಿಎಲ್ ಕಾರ್ಡ್ ಇದ್ದವರಿಗೆ ಮಾತ್ರ. ಕೇಂದ್ರ ಸರ್ಕಾರದಿಂದ 50 ಸಾವಿರ ರೂ. ಇದು ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿದ ಎಲ್ಲರಿಗೂ ಸಿಗಲಿದೆ. ಬಿಪಿಎಲ್ ಕಾರ್ಡ್ ಇರುವವರಿಗೆ ಒಟ್ಟು 1.50 ಲಕ್ಷ ರೂ. ಹಣ ಬರುತ್ತದೆ. ಎಪಿಎಲ್ ಕಾರ್ಡ್ ಹೊಂದಿದವರಿಗೆ ಕೇಂದ್ರ ಸರ್ಕಾರದ 50 ಸಾವಿರ ರೂ.ಪರಿಹಾರ ಮಾತ್ರ ಬರುತ್ತದೆ. ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ವಿಭಾಗದಿಂದ ಪರಿಹಾರ ಕೊಡುತ್ತೇವೆ ಎಂದರು.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು :
ಕೋವಿಡ್ ಸೋಂಕಿತರ ವರದಿಯ ಬಿ.ಯು ನಂಬರ್, ಮೃತ ವ್ಯಕ್ತಿಯ ಮರಣ ಪತ್ರ, ಮೃತ ವ್ಯಕ್ತಿಯ ಬಿಪಿಎಲ್ ಕಾರ್ಡ್, ಆಧಾರ್ ಪ್ರತಿ, ಗುರುತಿನ ಚೀಟಿ, ಅರ್ಜಿದಾರರ ಬ್ಯಾಂಕ್ ಅಕೌಂಟ್ ವಿವರ ಕೊಡಬೇಕು. ಅರ್ಜಿದಾರರ ಸ್ವಯಂ ಘೋಷಣಾ ಫಾರಂ-2 ನೀಡಬೇಕು, ಕುಟುಂಬದ ಉಳಿದವರಿಗೆ ಕೊಡಬೇಕಾದರೆ ಫಾರಂ-3 ಅರ್ಜಿ ಕೊಡಬೇಕು. ಅರ್ಜಿಗಳನ್ನು ಜಿಲ್ಲಾಧಿಕಾರಿ ,ತಹಶಿಲ್ದಾರರ್ ಗೆ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಪರಿಹಾರದ ಹಣ ಆರ್ ಟಿಜಿಎಸ್ ಮೂಲಕ ಅಕೌಂಟ್ ಗೆ ಹೋಗುತ್ತದೆ. ಈ ಕಮಿಟಿಯಲ್ಲಿ ಜಿಲ್ಲಾಧಿಕಾರಿ, ವೈದ್ಯಾಧಿಕಾರಿ, ಸದಸ್ಯ ಕಾರ್ಯದರ್ಶಿ ಇರುತ್ತಾರೆ. ಆರೋಗ್ಯ ಇಲಾಖೆಯಿಂದ ಪರಿಶೀಲಿಸಿ ನಿರ್ಧಾರ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.