ಕೋವಿಡ್ ನಿಂದ ಮೃತಪಟ್ಟ ಕುಟುಂಗಳಿಗೆ 50 ಸಾವಿರ ರೂ. ಪರಿಹಾರ ನೀಡಲು ಎನ್‍ಡಿಎಂಎ ಶಿಫಾರಸು.

67
firstsuddi

ನವದೆಹಲಿ : ಕೋವಿಡ್ ನಿಂದ ಮೃತಪಟ್ಟ ಪ್ರತಿ ಕುಟುಂಬಗಳಿಗೆ 50 ಸಾವಿರ ಪರಿಹಾರ ನೀಡಲು ಎನ್‍ಡಿಎಂಎ ಶಿಫಾರಸು ಮಾಡಿದೆ.

ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡಲು ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಈ ವೇಳೆ ಸುಪ್ರೀಂಕೋರ್ಟ್ ಗೆ ಉತ್ತರಿಸಿರುವ ಕೇಂದ್ರ ಸರ್ಕಾರ, ಕೊರೊನಾದಿಂದಾಗಿ ಮೃತಪಟ್ಟವರ ಸಂಬಂಧಿಕರಿಗೆ ಪರಿಹಾರ ನೀಡುವ ಕಾರ್ಯಕ್ಕೆ ಮುಂದಾಗಿದ್ದು,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಐಸಿಎಂಆರ್ ನೀಡಿರುವ ಮಾರ್ಗಸೂಚಿಗಳ ಪ್ರಕಾರ ಕೋವಿಡ್-19ನಿಂದ ಮೃತಪಟ್ಟಿದ್ದಾರೆ ಎಂದು ಪ್ರಮಾಣೀಕರಿಸಿದರೆ ಪರಿಹಾರ ನೀಡಲು ಸರ್ಕಾರ ಸಿದ್ಧಗೊಂಡಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಪರಿಹಾರ ನೀಡುವ ಬಗ್ಗೆ ಸೆಪ್ಟೆಂಬರ್ 11ರೊಳಗೆ ಅಫಿಡವಿಟ್ ಸಲ್ಲಿಸಬೇಕೆಂದು ಕೇಂದ್ರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಅದಲ್ಲದೆ ನೀವು ಮಾರ್ಗಸೂಚಿ ರೂಪಿಸುವುದರೊಳಗೆ ಮೂರನೇ ಅಲೆ ಕೂಡ ಬಂದು ಹೋಗಬಹುದೇನೋ ಎಂಬ ಅನುಮಾನವನ್ನೂ ನ್ಯಾಯಪೀಠ ವ್ಯಕ್ತಪಡಿಸಿತ್ತು. ಇದೀಗ ಈ ಬಗ್ಗೆ ಕೇಂದ್ರ ಪರಿಹಾರ ನೀಡಲು ಒಪ್ಪಿಗೆ ಸೂಚಿಸಿದೆ.