ಬೆಳಗಾವಿ : ಕೊರೊನಾ ರೂಲ್ಸ್ ಬ್ರೇಕ್ ಮಾಡಿದ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಪ್ರಕರಣ ದಾಖಲಾಗಿದೆ.
ವಾರಾಂತ್ಯದ ನಿಷೇಧಾಜ್ಞೆ ಮಧ್ಯೆಯೂ ಧರ್ಮವೀರ ಸಂಭಾಜಿ ಪಟ್ಟಾಭಿಷೇಕ ದಿನಾಚರಣೆಯಲ್ಲಿ ಅನಿಲ್ ಬೆನಕೆ ಭಾಗಿಯಾಗಿದ್ದರು. ಜನವರಿ 16ರಂದು ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಮಾಸ್ಕ್ ಧರಿಸದೆ 20ಕ್ಕೂ ಹೆಚ್ಚು ಜನರು ಜಮಾವಣೆಗೊಂಡಿದ್ದರು. ಶಾಸಕ ಅನಿಲ್ ಬೆನಕೆ ವಿರುದ್ಧ ತೀವ್ರ ಜನಾಕ್ರೋಶ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತ ನಗರದ ಕ್ಯಾಂಪ್ ಠಾಣೆ ಪೊಲೀಸರು ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ಅಲ್ಲದೆ ಸಂಕ್ರಮಣದಂದು ಎಮ್ಮೆ ಓಡಿಸುವ ಸ್ಪರ್ಧೆ ಆಯೋಜಿಸಿದ್ದ ಆಯೋಜಕರ ವಿರುದ್ಧವೂ ಕೇಸ್ ದಾಖಲಾಗಿದ್ದು, ಎಮ್ಮೆ ಓಡಿಸುವ ಸ್ಪರ್ಧೆಗೂ ಶಾಸಕ ಅನಿಲ್ ಬೆನಕೆ ಚಾಲನೆ ನೀಡಿದ್ದರು. ಈ ವೇಳೆ ಸ್ಪರ್ಧೆ ನೋಡಲು ಸಾವಿರಾರು ಜನರು ಆಗಮಿಸಿದ್ದರು.










