ಮುಂಬೈ(ಮಹಾರಾಷ್ಟ್ರ) : ಕೊರೊನಾ ನಿಯಂತ್ರಿಸುವ ಸಲುವಾಗಿ ದೇಶದಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ. ಸುಖಾಸುಮ್ಮನೇ ರಸ್ತೆಗಿಳಿದರೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಈ ನಿಯಮ ಕೇವಲ ಜನಸಾಮಾನ್ಯರಿಗೆ ಮಾತ್ರವಲ್ಲದೇ ಸೆಲೆಬ್ರಿಟಿಗಳಿಗೂ ಅನ್ವಯವಾಗುತ್ತದೆ. ಆದರೆ ಬಾಲಿವುಡ್ ನಟ ಟೈಗರ್ ಶ್ರಾಫ್ ಹಾಗೂ ದಿಶಾ ಪಟಾನಿ ಅವರು ಕೋವಿಡ್ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ.
ನಿನ್ನೆ ದಿಶಾ ಪಟಾನಿ ಹಾಗೂ ಟೈಗರ್ ಶ್ರಾಫ್ ಅವರು ಬ್ಯಾಂಡ್ ಸ್ಟ್ಯಾಂಡ್ ಬಳಿ ಅನಾವಶ್ಯಕವಾಗಿ ತಿರುಗಾಡುತ್ತಿರುವುದು ಕಂಡುಬಂದಿದೆ. ಪೊಲೀಸರು ಇವರನ್ನು ತಡೆದು ಪರಿಶೀಲನೆ ನಡೆಸಿದಾಗ ಹೊರಗಡೆ ಸುತ್ತಾಡುತ್ತಿರುವುದಕ್ಕೆ ಸರಿಯಾದ ಕಾರಣವನ್ನು ಹೇಳಿಲ್ಲ. ಸುಖಾಸುಮ್ಮನೇ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸುವ ಮೂಲಕ ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿದ ಆರೋಪದ ಮೇಲೆ ಕೇಸ್ ದಾಖಲಿಸಿಕೊಳ್ಳಲಾಗಿದೆ. ಆದರೆ ಇವರನ್ನು ಬಂಧಿಸಿಲ್ಲ ಎಂದು ಮುಂಬೈ ಪೊಲೀಸ್ ಮೂಲಗಳು ತಿಳಿಸಿವೆ.










