ಕೋವಿಡ್ ಸಂದರ್ಭದಲ್ಲಿ ಭಿಕ್ಷೆ ಬೇಡಿದ್ರಲ್ಲ, ಆ ಹಣ ಎಲ್ಲಿ ಹೋಯ್ತ? ಡಿಕೆಶಿಗೆ ಬೊಮ್ಮಾಯಿ ತಿರುಗೇಟು…

69
firstsuddi

ಬೆಂಗಳೂರು : ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ವಿತರಿಸಲು ಸರ್ಕಾರದ ಬಳಿ ಹಣ ಇಲ್ಲದಿದ್ದರೆ ಬಹಿರಂಗವಾಗಿ ಹೇಳಲಿ. ರಾಜ್ಯದ ಜನರ ಬಳಿ ಭಿಕ್ಷೆ ಬೇಡಿ ಮಕ್ಕಳಿಗೆ ಶೂ, ಸಾಕ್ಸ್ ಕೊಡಿಸುವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಭಿಕ್ಷೆ ಬೇಡಿದ್ರಲ್ಲ ಆ ಹಣ ಎಲ್ಲಿ ಹೋಯ್ತ?. ಇದೇ ರೀತಿ ಇದೂ ಕೂಡ ಎಂದು ತಿರುಗೇಟು ನೀಡಿದರು.

ಸರ್ಕಾರ ಈಗಾಗಲೇ ಸಮವಸ್ತ್ರ, ಶೂಗೆ ಅನುಮೋದನೆ ಕೊಟ್ಟಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು 132 ಕೋಟಿ ಮೊತ್ತದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಶಾಲಾ ಮಕ್ಕಳ ಬಟ್ಟೆ ಸಹ ತಯಾರಾಗುತ್ತಿದ್ದು, ಆದಷ್ಟು ಬೇಗ ವಿತರಣೆ ಮಾಡಲಿದ್ದೇವೆ ಎಂದರು.