ಕೋವಿಡ್ ಸೋಂಕಿತರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಸರ್ಕಾರದಿಂದ ಪರಿಹಾರ ಸಿಗಲ್ಲ : ಸಚಿವ ಮಾಧುಸ್ವಾಮಿ.

69
firstsuddi

ತುಮಕೂರು : ಕೊರೊನಾ ಸೋಂಕಿತರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯದೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಸರ್ಕಾರದಿಂದ ಯಾವುದೇ ಪರಿಹಾರಗಳು ಸಿಗುವುದಿಲ್ಲ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಪೂರಕವಾಗಿ ಎಲ್ಲಾ ಚಿಕಿತ್ಸಾ ಸೌಲಭ್ಯವನ್ನು ಕಲ್ಪಿಸಲಾಗಿದೆ. ಕೋವಿಡ್ ಸೋಂಕಿತರು ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬೇಕು, ಅಥವಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಬಳಿಕ ಖಾಸಗಿ ಆಸ್ಪತ್ರೆಗೆ ರೆಫರ್ ಆಗಿರಬೇಕು. ಅಂತಹ ಸಂದರ್ಭದಲ್ಲಿ ಪರಿಹಾರ ಸಿಗುವ ಸಾಧ್ಯತೆ ಇರುತ್ತದೆ. ಆದರೆ ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರೆ ಪರಿಹಾರ ನೀಡಲಾಗುವುದಿಲ್ಲ ಹಾಗೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ ಅಂತವರಿಗೆ ಸರ್ಕಾರಿ ಸೌಲಭ್ಯಗಳು ಸಿಗುವುದಿಲ್ಲ ಎಂದು ಹೇಳಿದ್ದಾರೆ.