ಕೋವಿಡ್-19 ಕ್ಕೆ ಉಡುಪಿ ಜಿಲ್ಲೆಯಲ್ಲಿ ಐದನೇ ಬಲಿ – ಪಡುಬಿದ್ರೆ 82 ವರ್ಷದ ವೃದ್ಧ ಸಾವು…

110
firstsuddi

ಉಡುಪಿ: ಮಹಾಮಾರಿ ಕೋವಿಡ್-19 ಕ್ಕೆ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಬಲಿ ಪಡೆದಿದ್ದು ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಮೃತಪಟ್ಟ ವ್ಯಕ್ತಿ ಕಾಪು ತಾಲೂಕಿನ ಪಡುಬಿದ್ರೆಯ 82 ವರ್ಷ ವಯಸ್ಸಿನ ವೃದ್ಧರಾಗಿದ್ದು , ಶ್ವಾಸಕೋಶ ಮತ್ತು ಕಿಡ್ನಿ ಸಮಸ್ಯೆಗಾಗಿ ನಗರದ ಖಾಸಗಿ ಆಸ್ಪತ್ರೆ ದಾಖಲಾಗಿದ್ದು ಸೋಮವಾರ ಸಂಜೆ ಮೃತಪಟ್ಟಿದ್ದರು. ಅವರ ಗಂಟಲ ದ್ರವ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದಿದ್ದು ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಕೋವಿಡ್ ಮಾರ್ಗಸೂಚಿಯಂತೆ ಬೀಡಿಗುಡ್ಡೆಯಲ್ಲಿ ನಡೆಸಲಾಗಿದೆ.