ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ ಮಗಳು ಆತ್ಮಹತ್ಯೆ…

131
firstsuddi

ಹಾವೇರಿ : ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹಿರೇಕೆರೂರಿನಲ್ಲಿ ನಡೆದಿದೆ. ತಾಯಿ ಶಿವಕ್ಕ(42) ಹಾಗೂ ಪುತ್ರಿ ಸಂಗೀತ(20) ಆತ್ಮಹತ್ಯೆಗೆ ಶರಣಾದ ತಾಯಿ ಮಗಳು. ಇಬ್ಬರು ಕೌಟುಂಬಿಕ ಕಲಹದಿಂದ ಮನನೊಂದು ತಾಯಿ ತನ್ನ ಮಗಳನ್ನು ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬಳಿಕ ಸ್ಥಳಕ್ಕೆ ಧಾವಿಸಿದ ಹಿರೇಕೆರೂರು ಠಾಣಾ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ಇಬ್ಬರ ಮೃತದೇಹವನ್ನು ಹೊರತೆಗೆದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ