ಕೌಟುಂಬಿಕ ಕಲಹದ ಹಿನ್ನೆಲೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಂದೆ ಸೇರಿದಂತೆ ಮೂವರು ಮಕ್ಕಳು…

245
firstsuddi

ಹಾಸನ : ಕೌಟುಂಬಿಕ ಕಲಹದ ಹಿನ್ನೆಲೆ ತಂದೆಯೇ ತನ್ನ ಮೂವರು ಮಕ್ಕಳಿಗೆ ವಿಷವನ್ನು ನೀಡಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೇಲೂರು ತಾಲ್ಲೂಕಿನ ನಿಡಗೋಡು ಗ್ರಾಮದಲ್ಲಿ ನಡೆದಿದೆ. ಲೋಕೇಶ್(40), ಸೃಷ್ಟಿ(14), ಸ್ನೇಹ(12), ಮಂಜುನಾಥ್ (8) ಆತ್ಮಹತ್ಯೆಗೆ ಯತ್ನಿಸಿದವರು ಎಂದು ತಿಳಿದು ಬಂದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ಮನೆ ಬಿಟ್ಟು ಹೋಗಿದ್ದರಿಂದ ತಂದೆ ಮಕ್ಕಳು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು, ಮಕ್ಕಳ ನರಳಾಟವನ್ನು ಕೇಳಿದ ಗ್ರಾಮಸ್ಥರು ಅವರನ್ನು ಬೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದ್ದು, ತಂದೆಯ ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.