ಊಟದ ವಿಚಾರಕ್ಕೆ ಜಗಳ – ತಾಯಿ, ಮಗ ಆತ್ಮಹತ್ಯೆಗೆ ಶರಣು…

56
firstsuddi

ರಾಮನಗರ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕುಮಾರಸ್ವಾಮಿ ಲೇಔಟ್ ನಲ್ಲಿ ನಡೆದಿದೆ. ವಿಜಯಲಕ್ಷ್ಮಿ (50) ಹಾಗೂ ಹರ್ಷ (25) ಮೃತರು.

ತಾಯಿ ವಿಜಯಲಕ್ಷ್ಮಿ ಜೊತೆ ಊಟದ ವಿಚಾರಕ್ಕೆ ಮಗ ಹರ್ಷ ರಾತ್ರಿ ಜಗಳವಾಡಿದ್ದ. ಮಗನ ಮಾತಿನಿಂದ ಮನನೊಂದ ವಿಜಯಲಕ್ಷ್ಮಿ ಮನೆಯ ಬಳಿ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಳಿಕ ವಿಜಯಲಕ್ಷ್ಮಿ ಅವರನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ತಾಯಿ ಮೃತಪಟ್ಟ ವಿಚಾರ ತಿಳಿದು ಮನನೊಂದ ಹರ್ಷ ನಾನೇ ತಾಯಿಯ ಸಾವಿಗೆ ಕಾರಣನಾದೆ ಎಂದು ಭಾವಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.