ಕೌಟುಂಬಿಕ ಕಲಹ ; ಪತ್ನಿ-ಅತ್ತೆಯ ಬರ್ಬರ ಹತ್ಯೆ…

129
firstsuddi

ಹಾಸನ : ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಹಾಗೂ ಅತ್ತೆಯನ್ನು ಬರ್ಬರವಾಗಿ ಹತ್ಯೆಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದವರನ್ನು ಭಾರತಿ (55), ಮಂಜುಳಾ (28) ಎಂದು ಗುರುತಿಸಲಾಗಿದೆ. ನಿನ್ನೆ ಜಮೀನಿನ ಬಳಿ ಕೆಲಸ ಮಾಡುತ್ತಿದ್ದ ವೇಳೆ ಪತಿ ಹಾಗೂ ಪತ್ನಿ ನಡುವೆ ಜಗಳವಾಗಿದೆ. ಈ ವೇಳೆ ಶ್ರೀಧರ್ ಎಂಬಾತ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದು ಅತ್ತೆಯನ್ನೂ ಕೊಲೆ ಮಾಡಿದ್ದಾನೆ.

ಗಂಡಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಎಸ್ ಪಿ ಶ್ರೀನಿವಾಸಗೌಡ, ಸಿಪಿಐ ವಸಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.