ಕೌಟುಂಬಿಕ ಕಲಹ ಹಿನ್ನೆಲೆ ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ…

212
firstsuddi

ಕೊಪ್ಪಳ : ಕೌಟುಂಬಿಕ ಕಲಹ ಹಿನ್ನೆಲೆ ಮಹಿಳೆಯೊಬ್ಬರು ತಮ್ಮ ಮೂವರು ಮಕ್ಕಳನ್ನು ನೀರಿನ ಪಾತ್ರೆಯಲ್ಲಿ ಮುಳುಗಿಸಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕುಕನೂರು ತಾಲ್ಲೂಕು ಯರೇಹಂಚಿನಾಳ ಗ್ರಾಮದಲ್ಲಿ ನಡೆದಿದೆ. ಯಲ್ಲಮ್ಮ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹಾಗೂ ಅಕ್ಷತಾ(6), ಕಾವೇರಿ(4), ನಾಗರಾಜ(2) ಮೃತ ಮಕ್ಕಳು ಎನ್ನಲಾಗಿದ್ದು, ಪತಿ ಮನೆಯ ಹೊರಗಡೆ ಮಲಗಿದ್ದ ವೇಳೆ ಮಹಿಳೆ ಸೋಮವಾರ ತಡರಾತ್ರಿ ಈ ಕೃತ್ಯ ಎಸಗಿದ್ದು, ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.