ಹಾಸನ: ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ 35 ಮಂದಿ ಸೈನಿಕರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಕುಡುಗರಹಳ್ಳಿಯಲ್ಲಿ ನಡೆದಿದೆ.
ವಾಹನ ಚಾಲನಾ ತರಬೇತಿಗೆ ತಂಗಿದ್ದ ಸೈನಿಕರು, ಮಧ್ಯಾಹ್ನ ಕ್ಯಾಂಪ್ನಲ್ಲೇ ತಯಾರಾದ ಆಹಾರ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದು ಅವರನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಸ್ವಸ್ಥರಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೈನಿಕರನ್ನು ಭೇಟಿಯಾದ ಶಾಸಕ ಸಿಮೆಂಟ್ ಮಂಜು ಆರೋಗ್ಯ ವಿಚಾರಿಸಿದ್ದು, ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.










