ಬಾಲಿವುಡ್ ನಟಿ ಪೂನಂ ಪಾಂಡೆ ಅವರು ಇಂದು ವಿಧಿವಶರಾಗಿದ್ದಾರೆ. ಗರ್ಭಕಂಠ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೂನಂ ಇದೀಗ 32ನೇ ವಯಸ್ಸಿಗೆ ನಿಧನರಾಗಿದ್ದಾರೆ.
ಮಾಡೆಲ್ ಕಂ ನಟಿಯಾಗಿದ್ದ ಪೂನಂ ಪಾಂಡೆ ಸದಾ ಕಾಂಟ್ರವರ್ಸಿಗಳಿಂದ ಸದ್ದು ಮಾಡುತ್ತಿದ್ದರು. ಪೂನಂ ಪಾಂಡೆ ಅವರ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಒಂದನ್ನು ಮಾಡಲಾಗಿದೆ. ಇಂದು ಮುಂಜಾನೆ ಸಾಕಷ್ಟು ಕಷ್ಟಕರವಾಗಿತ್ತು. ಸರ್ವಿಕಲ್ ಕ್ಯಾನ್ಸರ್‌ನಿಂದ ನಮ್ಮ ಪ್ರೀತಿಯ ಪೂನಂ ಪಾಂಡೆ ಅವರನ್ನು ಕಳೆದುಕೊಂಡಿದ್ದೇವೆ. ಈ ದುಃಖದ ಸಂದರ್ಭದಲ್ಲಿ ನಮಗೆ ಪ್ರೈವಸಿ ನೀಡಿ ಎಂದು ಪೋಸ್ಟ್ ಮಾಡಲಾಗಿದೆ.
ಯಾವಾಗಲೂ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೂನಂ ಪಾಂಡೆ ಅವರು ರಾಮನ ಭಕ್ತೆ ಕೂಡ ಆಗಿದ್ದರು ಎಂಬುದು ವಿಶೇಷ. ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಆಗಿದ್ದನ್ನು ಅವರು ಸಂಭ್ರಮಿಸಿದ್ದರು.
ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ್ದ ಅವರು ರಿಯಾಲಿಟಿ ಶೋಗಳ ಮೂಲಕ ಫೇಮಸ್ ಆಗಿದ್ದರು. ಬೋಲ್ಡ್ ಅವತಾರದಲ್ಲಿ ಅವರು ಪಡ್ಡೆಗಳ ಕಣ್ಣು ಕುಕ್ಕುತ್ತಿದ್ದರು. ಸದಾ ಕಾಲ ಹಾಟ್ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು 12 ಲಕ್ಷ ಜನರು ಫಾಲೋ ಮಾಡುತ್ತಿದ್ದರು. ಪೂನಂ ಪಾಂಡೆ ಸಾವಿನ ಸುದ್ದಿಯನ್ನು ಅಭಿಮಾನಿಗಳಿಗೆ ನಂಬಲು ಸಾಧ್ಯವಾಗುತ್ತಿಲ್ಲ. ಅವರ ನಿಧನಕ್ಕೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ.










