ಕ್ರಿಕೆಟ್‍ನಿಂದ ಬಿಗ್ ಬ್ರೆಕ್ ಪಡೆದ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್.

42

ಇಂಗ್ಲೆಂಡ್ ತಂಡದ ಸ್ಟಾರ್ ಆಲ್‍ರೌಂಡರ್ ಬೆನ್ ಸ್ಟೋಕ್ಸ್ ಈ ಬಾರಿಯ ಐಪಿಎಲ್‍ಗೆ ಹೆಸರು ನೋಂದಾಯಿಸಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಅವರ ಗಾಯದ ಸಮಸ್ಯೆ ಎಂದು ತಿಳಿದಿದೆ. ಏಕೆಂದರೆ ಇದೀಗ ನ್ಯೂಝಿಲೆಂಡ್ ವಿರುದ್ಧದ ಸರಣಿಯ ಮುಕ್ತಾಯದ ಬೆನ್ನಲ್ಲೇ ಸ್ಟೋಕ್ಸ್ ಶಸ್ತ್ರಚಿಕಿತ್ಸೆಗಾಗಿ ದೀರ್ಘಾವಧಿಯ ವಿಶ್ರಾಂತಿ ಪಡೆದು ಚಿಕಿತ್ಸೆಗೆ ಒಳಗಾಗಲು ನಿರ್ಧರಿಸಿದ್ದಾರೆ. ಇದೇ ಕಾರಣದಿಂದಾಗಿ ಬೆನ್ ಸ್ಟೋಕ್ಸ್ ಅವರನ್ನು ಮುಂಬರುವ ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾಗಿಲ್ಲ. ಅವರ ಬದಲಿಗೆ ಯುವ ಆಲ್‍ರೌಂಡರ್ ಜೇಕಬ್ ಬೆಥೆಲ್‍ಗೆ ಸ್ಥಾನ ನೀಡಲಾಗಿದೆ. ಇದಕ್ಕೂ ಮುನ್ನ 2023ರ ಏಕದಿನ ವಿಶ್ವಕಪ್ ವೇಳೆಯೂ ಗಾಯದಿಂದ ಬಳಲಿದ್ದ ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೀಗ ಮತ್ತೆ ಮಂಡಿರಜ್ಜು ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿ ದೀರ್ಘಾವಧಿಯ ಬ್ರೇಕ್ ತೆಗೆದುಕೊಳ್ಳಲು ಬೆನ್ ಸ್ಟೋಕ್ಸ್ ನಿರ್ಧರಿಸಿದ್ದಾರೆ. ಹೀಗಾಗಿ ಭಾರತದ ವಿರುದ್ಧದ ಏಕದಿನ ಸರಣಿಯಲ್ಲಿ ಬೆನ್ ಸ್ಟೋಕ್ಸ್ ಕಾಣಿಸಿಕೊಳ್ಳುವುದಿಲ್ಲ. ಈ ಸರ್ಜರಿ ಬಳಿಕ ವಿಶ್ರಾಂತಿ ಮುಂದುವರೆಸಲಿರುವ ಬೆನ್ ಸ್ಟೋಕ್ಸ್ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಅಥವಾ ಜೂನ್‍ನಲ್ಲಿ ನಡೆಯಲಿರುವ ಭಾರತದ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಅದುವರೆಗೆ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕರಾಗಿ ಓಲೀ ಪೋಪ್ ಕಾಣಿಸಿಕೊಳ್ಳಲಿದ್ದಾರೆ.