ಕ್ರಿಮಿನಲ್ ಕೇಸ್ ಹಾಕಲು ಇಲ್ಲಿ ಯಾವ ಅಪರಾಧ ನಡೆದಿದೆ? : ಆಲಿಯಾ ಅಸಾದಿ ಪ್ರಶ್ನೆ…

58
firstsuddi

ಉಡುಪಿ : ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ಟ್ವೀಟ್ ಮಾಡಿ ಉಡುಪಿ ಶಾಸಕ ರಘುಪತಿ ಭಟ್ ವಿರುದ್ಧ ಕಿಡಿಕಾರಿದ್ದಾರೆ. 

ಪರೀಕ್ಷಾ ಕೇಂದ್ರದಲ್ಲಿ ನನಗೆ ಮತ್ತು ರೇಷಂಗೆ ಪರೀಕ್ಷೆ ಬರೆಯಲು ಸಿಬ್ಬಂದಿ ನಿರಾಕರಿಸಿದ್ದಾರೆ. ನಾವು ಮತ್ತೆ ಮತ್ತೆ ನಿರಾಸೆಗೆ ಒಳಗಾಗುತ್ತಿದ್ದೇವೆ. ಕ್ರಿಮಿನಲ್ ಕೇಸು, ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಶಾಸಕ ರಘುಪತಿ ಭಟ್ ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್ ಕೇಸು ಹಾಕಲು ಇಲ್ಲಿ ಯಾವ ಅಪರಾಧ ನಡೆದಿದೆ? ನಮ್ಮ ದೇಶ ಎತ್ತ ಸಾಗುತ್ತಿದೆ? ಎಂದು ಪ್ರಶ್ನೆ ಮಾಡಿದ್ದಾರೆ.

ಉಡುಪಿಯ ಹಿಜಾಬ್ ಹೋರಾಟಗಾರ್ತಿಯರಾದ ಮಹಿಳಾ ಸರ್ಕಾರಿ ಪಿಯು ಕಾಲೇಜಿನ ಆಲಿಯಾ ಅಸಾದಿ ಮತ್ತು ರೇಷಂ ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದಿದ್ದರು. ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಪಟ್ಟು ಹಿಡಿದಿದ್ದರು. ಆದರೆ ಪರೀಕ್ಷಾ ಮೇಲ್ವಿಚಾರಕರು ಮತ್ತು ತಹಶೀಲ್ದಾರ್ ಅನುಮತಿ ನೀಡದ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಿಂದ ಹೊರ ನಡೆದಿದ್ದರು.

ಈ ಕುರಿತಂತೆ ಪ್ರತಿಕ್ರಿಯಿಸಿದ್ದ ರಘುಪತಿ ಭಟ್ ಇದೇ ರೀತಿ ಡ್ರಾಮಾ ಮುಂದುವರಿದರೆ ಕ್ರಿಮಿನಲ್ ಕೇಸ್, ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುತ್ತೇವೆ. ಈ ಕುರಿತು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜೊತೆ ನಾನು ಈಗಾಗಲೇ ಮಾತನಾಡಿದ್ದೇನೆ. ಪರೀಕ್ಷಾ ಕೇಂದ್ರದಲ್ಲಿ ಹುಡುಗಾಟಿಕೆ ಮಾಡುವಂತಿಲ್ಲ. ಈ ಮಕ್ಕಳನ್ನು ನಾವು ಇನ್ನು ಮುಂದೆ ಲಘುವಾಗಿ ಪರಿಗಣಿಸುವುದಿಲ್ಲ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಕ್ರಿಮಿನಲ್ ಕೇಸು ಹಾಕಿ ಎಂದು ಆಗ್ರಹ ಮಾಡಿದ್ದೇನೆ ಎಂದು ತಿಳಿಸಿದ್ದರು.