ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಫ್ಯೂ ಇಲ್ಲ, ಮುಂದಿನ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ.ಸುದರ್ಶನ್ ಅವರ ಜೊತೆ ಚರ್ಚೆ ಮಾಡಿದ್ದೇವೆ. ಒಮಿಕ್ರಾನ್ ಕುರಿತು ವಿವರಣೆ ನೀಡಿದ್ದಾರೆ. ಕೋವಿಡ್ ರೂಪಾಂತರಿ ತಳಿ ಒಮಿಕ್ರಾನ್ ಕುರಿತು ಯಾರೂ ಕೂಡಾ ಆತಂಕಗೊಳ್ಳುವ ಅವಶ್ಯಕತೆ ಇಲ್ಲ. ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹಾಸ್ಟೆಲ್ ಗಳಿಗೆ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿದ್ದೇವೆ. ಒಂದೇ ಬಾರಿ ಎಲ್ಲಾ ವಿದ್ಯಾರ್ಥಿಗಳು ಊಟಕ್ಕೆ ಹೋಗದಂತೆ ಸೂಚನೆ ನೀಡಲಾಗಿದೆ ಎಂದರು.
ನರ್ಸಿಂಗ್ ವಿದ್ಯಾರ್ಥಿಗಳಿಗೆ ಎರಡು ಡೋಸ್ ಕಡ್ಡಾಯ. ಕ್ರಿಸ್ಮಸ್, ಹೊಸ ವರ್ಷಕ್ಕೆ ಒಂದು ವಾರ ನೋಡಿಕೊಂಡು ಕೆಲ ನಿರ್ಬಂಧಗಳನ್ನು ವಿಧಿಸಲಾಗುವುದು. ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮುಂದುವರಿಯುತ್ತೆ. ಹಾಸ್ಟೆಲ್, ಕ್ಲಸ್ಟರ್ಗೆ ಮಾತ್ರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಸದ್ಯಕ್ಕೆ ಹೊಸದಾಗಿ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.










