ರಾಯಚೂರು : ಕ್ರೂಸರ್ ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಬಳಿ ನಡೆದಿದ್ದು, ಮೃತ ಮಹಿಳೆಯನ್ನು ಕೊಪ್ಪಳದ ಗಿಣಿಗೇರಾ ಮೂಲದ ಲಕ್ಷ್ಮೀದೇವಿ (45) ಎಂದು ಗುರುತಿಸಲಾಗಿದೆ.
ಹತ್ತಿ ಬಿಡಿಸಲು ಕೂಲಿ ಕಾರ್ಮಿಕರನ್ನ ಕ್ರೂಸರ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕ್ರೂಸರ್ ಟೈರ್ ಬ್ಲಾಸ್ಟ್ ಆಗಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲೆಯ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.










