ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ- ಓರ್ವನ ಕೊಲೆಯಲ್ಲಿ ಅಂತ್ಯ..

39
firstsuddi

ಮಡಿಕೇರಿ: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.

ಮೃತ ಯುವಕನನ್ನು 22 ವರ್ಷದ ಸಾಜಿದ್ ಎಂದು ಗುರುತಿಸಲಾಗಿದೆ. ಮೈಸೂರು ರಸ್ತೆಯಲ್ಲಿರುವ ಶ್ರೀನಿಧಿ ಎಂಬವರ ಸರ್ವಿಸ್ ಸ್ಟೇಷನ್ ನಲ್ಲಿ ಬೈಕ್ ಸರ್ವಿಸ್ ಮಾಡಲೆಂದು ಸಾಜೀದ್ ಬಂದಿದ್ದನು. ಈ ವೇಳೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ.

ಈ ವೇಳೆ ಕೋಪಗೊಂಡ ಶ್ರೀನಿಧಿ ಹರಿತವಾದ ಆಯುಧದಿಂದ ಸಾಜಿದ್​ಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಸಾಜಿದ್​ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಕುಶಾಲನಗರ ಟೌನ್ ಠಾಣಾ ಪೊಲೀಸರು ಆರೋಪಿ ಶ್ರೀನಿಧಿನನ್ನು ಬಂಧಿಸಿದ್ದಾರೆ.