ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ…

109
firstsuddi

ದಾವಣಗೆರೆ : ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ಆಗಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಮಲೇಬೆನ್ನೂರು ಗ್ರಾಮದ ಜಿಗಳಿ ಸರ್ಕಲ್ ನಲ್ಲಿರುವ ಸಾಯಿ ಬೇಕರಿ ಬಳಿ ನಡೆದಿದೆ.

ಅಭಿಷೇಕ್ ಎಂಬುವನು ಮಹಮ್ಮದ್ ಇರ್ಫಾನ್(24) ಗೆ ಚಾಕು ಇರಿದಿದ್ದಾನೆ. ಗಾಯಾಳು ಇರ್ಫಾನ್ ಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಜಿಲ್ಲಾಸ್ಪತ್ರೆಗೆ ಎಸ್ ಪಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದರು.

ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ಪೊಲೀಸ್ ಬಿಗಿ ಭದ್ರತೆ, ಸಾರ್ವಜನಿಕರಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಎಸ್ ಪಿ ಅವರು ಮನವಿ ಮಾಡಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಇಬ್ಬರು ಯುವಕರ ನಡುವಿನ ಗಲಾಟೆಗೆ ನಿಖರ ಕಾರಣ ತಿಳಿದುಬಂದಿಲ್ಲ.