ಕ್ಷುಲ್ಲಕ ಕಾರಣಕ್ಕೆ ಮಗನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ!

82
firstsuddi

ಮಂಗಳೂರು : ಮಗನಿಗೆ ತಂದೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಜಪ್ಪಿನಮೊಗರು ಎಂಬಲ್ಲಿ ನಡೆದಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ತಂದೆ ವಿಶ್ವನಾಥ್ ಶೆಟ್ಟಿ(52) ಎಂಬುವವರು ಮಗ ಸ್ವಾಮೀತ್ ಶೆಟ್ಟಿ(25)ಗೆ ಬೆಂಕಿ ಹಚ್ಚಿದ್ದಾರೆ.

ದನಗಳನ್ನು ಹೊರಗಡೆ ಕಟ್ಟಿಹಾಕಿದ್ದ ವಿಚಾರದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆಯಿತು. ಮಗನನ್ನು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹೊಡೆದಿದ್ದಾರೆ. ಬಳಿಕ ಮನೆಯ ಒಳಗಡೆ ಬಂದು ಬಾಗಿಲು ಮುಚ್ಚಿ, ಚಿಲಕ ಹಾಕಿ ಪ್ಲಾಸ್ಟಿಕ್ ಕ್ಯಾನ್ ನಲ್ಲಿದ್ದ ಪೆಟ್ರೊಲ್ ನ್ನು ಮಗನ ಮೈ ಮೇಲೆ ಸುರಿದು ಅಲ್ಲಿಯೇ ಇದ್ದ ಸಿಗರ್ ಲೈಟರ್ ನಿಂದ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಸುಟ್ಟಗಾಯಗಳಿಂದ ಬಳಲುತ್ತಿದ್ದ  ಸ್ವಾಮೀತ್ ಶೆಟ್ಟಿಗೆ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.