ಕ್ಷುಲ್ಲಕ ಕಾರಣ ; ಪಾನ್ ಅಂಗಡಿ ಮಾಲೀಕನ ಬರ್ಬರ ಹತ್ಯೆ!

80
firstsuddi

ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಪಾನ್ ಅಂಗಡಿ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಲಕ್ಷ್ಮೀ ನಗರದಲ್ಲಿ ನಡೆದಿದೆ.

ಪಾನ್ ಅಂಗಡಿ ಮಾಲೀಕ ಬಾಳಕೃಷ್ಣ ಶೆಟ್ಟಿ (50) ಕೊಲೆಯಾದ ವ್ಯಕ್ತಿ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಬಾಲಕೃಷ್ಣ ಶೆಟ್ಟಿ ಅವರು ಲಕ್ಷ್ಮೀ ನಗರದಲ್ಲಿ ಪಾನ್ ಶಾಪ್ ಇಟ್ಟುಕೊಂಡಿದ್ದರು. ರೌಡಿ ದತ್ತಾ ಜಂತಿನಕಟ್ಟಿ(22) ಅವರು ನಿಮ್ಮ ಅಂಗಡಿಯಲ್ಲಿ ನನ್ನ ಮೊಬೈಲ್ ಕಳ್ಳತನವಾಗಿದೆ ಎಂದು ಗಲಾಟೆ ಮಾಡಿದ್ದಾರೆ. ಇದೇ ವಿಚಾರಕ್ಕೆ ನಿನ್ನೆ ಮಧ್ಯಾಹ್ನ ಕೂಡ ಪಾನ್ ಶಾಪ್ ಗೆ ಬಂದು ಗಲಾಟೆ ಮಾಡಿದ್ದಾರೆ. ಆದರೆ ದತ್ತಾ ಇಷ್ಟಕ್ಕೆ ಸುಮ್ಮನಾಗದೇ ತಡರಾತ್ರಿ ಮನೆಗೆ ನುಗ್ಗಿ ಬಾಲಕೃಷ್ಣ ಶೆಟ್ಟಿ ಅವರನ್ನು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಶಹಾಪೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.