ಖಲಿಸ್ತಾನಿ ಬೆಂಬಲಿಗ ಅಮೃತ್‌ಪಾಲ್ ಸಿಂಗ್‌ನ ಆಪ್ತ ಸಹಾಯಕ ಅರೆಸ್ಟ್…

40
firstsuddi

ನವದೆಹಲಿ: ಖಲಿಸ್ತಾನಿ ಬೆಂಬಲಿಗ ಅಮೃತ್‌ಪಾಲ್ ಸಿಂಗ್‌ನ ಆಪ್ತ ಸಹಾಯಕ ಪಾಪಲ್‌ಪ್ರೀತ್ ಸಿಂಗ್ ಎಂಬಾತನನ್ನು ಪಂಜಾಬ್ ನ ಹೋಶಿಯಾರ್‌ಪುರದಲ್ಲಿ ಬಂಧಿಸಲಾಗಿದೆ.

ಕಳೆದ ತಿಂಗಳು ಜಲಂಧರ್ ನಲ್ಲಿ ಪೊಲೀಸರ ಬಲೆಯಿಂದ ಅಮೃತ್‌ಪಾಲ್ ಸಿಂಗ್ ಹಾಗೂ ಪಾಪಲ್‌ಪ್ರೀತ್ ಸಿಂಗ್ ತಪ್ಪಿಸಿಕೊಂಡಿದ್ದರು. ಬಳಿಕ ಇಬ್ಬರೂ ಒಟ್ಟಿಗೆ ತಲೆಮರೆಸಿಕೊಂಡಿದ್ದು, ಪೊಲೀಸರಿಂದ ತಪ್ಪಿಸಿಕೊಳ್ಳಲು ಬೇರೆ ಬೇರೆ ಮಾರ್ಗಗಳನ್ನು ಕಂಡುಹಿಡಿದು ಸ್ಥಳ ಬದಲಾವಣೆ ಮಾಡುತ್ತಿದ್ದರು. ಇದೀಗ ಪಂಜಾಬ್ ಪೊಲೀಸರ ಗುಪ್ತಚರ ಘಟಕ ಪಾಪಲ್‌ಪ್ರೀತ್ ಸಿಂಗ್ ನನ್ನು ಬಂಧಿಸಿದೆ.

ಪಾಪಲ್‌ಪ್ರೀತ್ ಸಿಂಗ್ ನ ಬಂಧನದ ಬಳಿಕವಾದರೂ ಅಮೃತ್‌ಪಾಲ್ ಸಿಂಗ್ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾನೆಯೇ ಎಂದು ಕಾದು ನೋಡಬೇಕಿದೆ.

ಪರಾರಿಯಾಗಿರುವ ಖಲಿಸ್ತಾನಿ ಬೆಂಬಲಿಗ ಅಮೃತ್‌ಪಾಲ್ ಸಿಂಗ್ ನನ್ನು ಹಿಡಿಯಲು ಕಳೆದ ಮೂರು ವಾರಗಳಿಂದ ಪ್ರಯತ್ನಿಸುತ್ತಿದ್ದು, ನಿರಂತರವಾಗಿ ಪೊಲೀಸರಿಂದ ನುಣುಚಿಕೊಳ್ಳುತ್ತಿದ್ದಾನೆ. ಅಮೃತ್‌ಪಾಲ್ ಈ ತಿಂಗಳ ಕೊನೆಯಲ್ಲಿ ಸಿಖ್ಖರ ಸಭೆ ಕರೆದಿದ್ದು, ಪಂಜಾಬ್ ಗೆ ಆಗಮಿಸುವ ಸಾಧ್ಯತೆ ಇದೆ. ಅಂದು ಪೊಲೀಸರಿಗೆ ಶರಣಾಗಬಹುದು ಎನ್ನಲಾಗಿದೆ.