ಖಾಸಗಿ ಬಸ್ ಡಿಕ್ಕಿಯಾಗಿ ಗುಂಡಿಗೆ ಬಿದ್ದ ಓಮ್ನಿ ವ್ಯಾನ್ -ಸ್ಥಳದಲ್ಲೇ ಇಬ್ಬರ ಸಾವು…

257
firstsuddi

ವಿಜಯಪುರ : ಖಾಸಗಿ ಬಸ್ ಡಿಕ್ಕಿಯಾಗಿ ಓಮ್ನಿ ವ್ಯಾನ್ ಗುಂಡಿಗೆ ಉರುಳಿ ಬಿದ್ದು ಅಜ್ಜಿ ಮತ್ತು ಮೊಮ್ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಯುಕೆಪಿ ವೃತ್ತದ ಅಂಡರ್ ಪಾಸ್‍ನಲ್ಲಿ ನಡೆದಿದೆ. ಮಹೀರಾಬಾನು ದೊಡ್ಡಮನಿ(3) ಹಾಗೂ ಚಾಂದಬೀ ಅಂಗಡಿ(45) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಓಮ್ನಿ ಕಾರಿನಲ್ಲಿ ಒಟ್ಟು 6ಮಂದಿ ವಿಜಯಪುರದ ಕಡೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್ ಓಮ್ನಿ ವ್ಯಾನ್‍ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಓಮ್ನಿ ರಸ್ತೆಯ ಪಕ್ಕದಲ್ಲಿದ್ದ ಗುಂಡಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಓಮ್ನಿಯಲ್ಲಿದ್ದ ಇನ್ನು ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ಕೊಲ್ಹಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಖಾಸಗಿ ಬಸ್‍ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.