ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ, ಸ್ಥಳದಲ್ಲೇ 6 ಮಂದಿ ಸಾವು…

243
firstsuddi

ಬೆಳಗಾವಿ : ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 6ಮಂದಿ ಸ್ಥಳದಲ್ಲೇ ಮೃತಪಟ್ಟು 20ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಸಾತಾರ ನಗರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಮುಂಬೈಯಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಎಸ್‍ಆರ್‍ಎಸ್ ಖಾಸಗಿ ಬಸ್ ಚಾಲಕನ ನಿರ್ಲಕ್ಷದಿಂದ ಮುಂದೆ ಹೋಗುತ್ತಿದ್ದ ಲಾರಿ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸೇರಿದಂತೆ 6ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 20 ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.