ಬೆಂಗಳೂರು : ಖೋಟಾನೋಟು ಚಲಾವಣೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಐಡಿ ಪೊಲೀಸರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಬಂಧಿಸಿದ್ದಾರೆ.
ಚಾಮರಾಜನಗರದ ಕೊಳ್ಳೆಗಾಲದ ಸಿಂಗನಲ್ಲೂರು ಗ್ರಾಮದ ನಿವಾಸಿಗಳಾದ ಶಿವ, ನಾಗೇಂದ್ರ, ಪ್ರಕಾಶ್ ಹಾಗೂ ಲಕ್ಷ್ಮಣ ಬಂಧಿತ ಆರೋಪಿಗಳು. ದೊಡ್ಡತೋಗುರು ಗ್ರಾಮದ ಸೆಲೆಬ್ರಿಟಿ ಲೇಔಟ್ ರಸ್ತೆಯಲ್ಲಿ ಸ್ವಿಫ್ಟ್ ಕಾರಿನಲ್ಲಿ ಖೋಟಾನೋಟು ಸಾಗಟ ಮಾಡುತ್ತಿದ್ದ ವೇಳೆ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಬಂಧಿತರಿಂದ 6.80 ಲಕ್ಷ ರೂ. ಮೌಲ್ಯದ 2 ಸಾವಿರ ಮುಖಬೆಲೆಯ 340 ನಕಲಿ ನೋಟುಗಳನ್ನು ಪೊಲೀಸರು ವಶಕ್ಕ್ಕೆ ಪಡೆದಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










