ಮತ್ತೆ ಹದಗೆಟ್ಟ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ…

83
firstsuddi

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ಮಾಹಿತಿ ನೀಡಿದ್ದಾರೆ.

ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ. ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಎಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ ಹೇಳಿದ್ದಾರೆ.

ಜನವರಿ 9ರಂದು ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಅವರ ಆರೋಗ್ಯ ಮತ್ತೆ ಹದಗೆಟ್ಟಿದ್ದು, ಅವರನ್ನು ವೆಂಟಿಲೇಟರ್‌ನಲ್ಲಿರಿಸಲಾಗಿದೆ.