ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರ…

139
firstsuddi

ಚೆನ್ನೈ : ಕೊರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಬಳಿಕ ಆಗಸ್ಟ್ 5ರಂದು ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಸೋಂಕು ತಗುಲಿರುವುದು ದೃಢವಾಗುತ್ತಿದ್ದಂತೆ ಚೆನ್ನೈನ ಎಂಜಿಎಂ ಹೆಲ್ತ್‍ಕೇರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಕಳೆದ ರಾತ್ರಿಯಿಂದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.