ಖ್ಯಾತ ನಿರ್ದೇಶಕ ಎಸ್.ಕೆ.ಭಗವಾನ್ ನಿಧನ…

80
firstsuddi

ಸ್ಯಾಂಡಲ್‍ವುಡ್ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್(90) ಅವರು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಬಿ. ದೊರೈ ರಾಜ್ ಹಾಗೂ ಎಸ್.ಕೆ ಭಗವಾನ್ ಒಟ್ಟಾಗಿ ಸಿನಿಮಾ ನಿರ್ದೇಶನ ಮಾಡುತ್ತಿದ್ದರು. ಈ ಜೋಡಿ ದೊರೈ ಭಗವಾನ್ ಎಂದೇ ಫೇಮಸ್ ಆಗಿತ್ತು. ದೊರೈ ರಾಜ್ ಅವರು 2000ರಲ್ಲಿ ನಿಧನ ಹೊಂದಿದ್ದರು. ಅವರನ್ನು ಅರಸಿಕೊಂಡು ಭಗವಾನ್ ಹೊರಟಿದ್ದಾರೆ.

1933ರಲ್ಲಿ ಮೈಸೂರಿನ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜನಿಸಿದ್ದ ಭಗವಾನ್ ಅವರು, ರಂಗಭೂಮಿ ಹಿನ್ನೆಲೆಯುಳ್ಳವರು. 1956ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕ ನಿರ್ದೇಶಕರಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದವರು. 1966ರಲ್ಲಿ ತೆರೆಕಂಡ ಸಂಧ್ಯಾರಾಗ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾಗಿ ಭಡ್ತಿ ಪಡೆದರು.

1968ರಲ್ಲಿ ರಿಲೀಸ್ ಆದ ರಾಜ್​ಕುಮಾರ್ ನಟನೆಯ ‘ಜೇಡರ ಬಲೆ’ ಚಿತ್ರಕ್ಕೆ ದೊರೈ-ಭಗವಾನ್ ನಿರ್ದೇಶನ ಮಾಡಿದರು. ಈ ಸಿನಿಮಾ ಯಶಸ್ಸು ಕಂಡಿತು. ಇದು ಕನ್ನಡದ ಮೊದಲ ಬಾಂಡ್ ಶೈಲಿಯ ಸಿನಿಮಾ. ಕಸ್ತೂರಿ ನಿವಾಸ, ಎರಡು ಕನಸು, ಬಯಲು ದಾರಿ, ಗಿರಿಕನ್ಯೆ, ಚಂದನದ ಗೊಂಬೆ, ಜೀವನ ಚೈತ್ರ, ಒಡಹುಟ್ಟಿದವರು, ಯಾರಿವನು, ಮುನಿಯನ ಮಾದರಿ ಹೀಗೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಭಗವಾನ್ ನಿಧನಕ್ಕೆ ಸಿನಿಪ್ರಿಯರು, ಕನ್ನಡ ಚಿತ್ರರಂಗದ ಹಿರಿಯರು ಸಂತಾಪ ಸೂಚಿಸುತ್ತಿದ್ದಾರೆ.