ಖ್ಯಾತ ವಕೀಲನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ದೂರು ದಾಖಲು…

69
firstsuddi

ಮಂಗಳೂರು : ನಗರದ ಖ್ಯಾತ ವಕೀಲ ಕೆ.ಎಸ್.ಎನ್.ರಾಜೇಶ್ ಎಂಬುವವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ.

ಈ ಸಂಬಂಧ ಲೋಕಾಯುಕ್ತ ಮತ್ತು ಎಸಿಬಿ ಸ್ಪೆಷಲ್ ಪಿಪಿ ಆಗಿರುವ ವಕೀಲ ರಾಜೇಶ್ ಮೇಲೆ ದೂರು ದಾಖಲಾಗಿದೆ. ಕಾನೂನು ವಿದ್ಯಾರ್ಥಿನಿಯಾಗಿರುವ 20 ವರ್ಷದ ಸಂತ್ರಸ್ತೆ ಕಳೆದ ಆಗಸ್ಟ್ 8ರಂದು ನ್ಯಾಯವಾದಿ ಕೆ.ಎಸ್.ಎನ್.ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದಳು. ಈ ನಡುವೆ, ರಾಜೇಶ್ ಯುವತಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಒತ್ತಾಯಿಸುತ್ತಿದ್ದ. ಕಳೆದ ಸೆ.25ರಂದು ತನ್ನ ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು, ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.