ಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಶ್ರೀ ಕದ್ರಿ ಗೋಪಾಲನಾಥ್ ಅವರ ನಿಧನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಾಪ

200
firstsuddi

ಬೆಂಗಳೂರು : ಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಶ್ರೀ ಕದ್ರಿ ಗೋಪಾಲನಾಥ್ ಅವರ ನಿಧನ ಹಿನ್ನೆಲೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದು, ಅಂತಾರಾಷ್ಟ್ರೀಯ ಖ್ಯಾತಿಯ ಸ್ಯಾಕ್ಸೋಫೋನ್ ಕಲಾವಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಶ್ರೀ ಕದ್ರಿ ಗೋಪಾಲನಾಥ್ ರವರ ನಿಧನ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಟ್ವೀಟ್ ಮಾಡಿದ್ದಾರೆ.