ಗಂಡಸ್ತನದ ಹೇಳಿಕೆ – ವಿಷಾದ ವ್ಯಕ್ತಪಡಿಸಿದ ಹೆಚ್‍ಡಿಕೆ.

77
firstsuddi

ಬೆಂಗಳೂರು : ಸಿಎಂ ಬೊಮ್ಮಾಯಿಗೆ ಗಂಡಸ್ತನ ಇದ್ರೆ ಕೂಡಲೇ ಹಿಂದೂ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದರು. ಇದೀಗ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಮಾತನಾಡುವ ಭರದಲ್ಲಿ ಗಂಡಸ್ತದ ಬಗ್ಗೆ ಹೇಳಿದ್ದೇನೆ. ಕೂಡಲೇ ಅದನ್ನ ಸರಿ ಮಾಡಿಕೊಂಡಿದ್ದೇನೆ. ಈದ್ಗಾ ಮೈದಾನದಲ್ಲಿ ಅಮಾಯಕ ಮಕ್ಕಳ ಬಲಿದಾನವಾಯ್ತು. ಇದನ್ನು ನೋಡಿದ ಮೇಲೆ ನನಗೆ ರೋಷ ಉಕ್ಕಿ ಬಂತು. ಆವೇಶದಲ್ಲಿ ನಾನು ಗಂಡಸ್ತನ ಅಂತ ಮಾತನಾಡಿದ್ದೆ. ಆಗಲೇ ಪದ ಬಳಕೆ ಬಗ್ಗೆ ಅನ್ಯಥಾ ಭಾವಿಸಬೇಡಿ ಅಂದಿದ್ದೇನೆ. ನನ್ನ ಪದ ಬಳಕೆಯಿಂದ ನೋವಾಗಿದ್ದರೆ ಸಾರ್ವಜನಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ.