ಇಸ್ಲಾಮಾಬಾದ್ : ಗಂಡು ಮಗು ಆಗುತ್ತದೆ ಎಂಬ ಮೂಢನಂಬಿಕೆಯಿಂದ ಗರ್ಭಿಣಿಯೊಬ್ಬರು ತಲೆಗೆ ಮೊಳೆ ಹೊಡೆದುಕೊಂಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಮಹಿಳೆಗೆ ಯಾವುದೇ ಮಾನಸಿಕ ಸಮಸ್ಯೆ ಇಲ್ಲ. ಆದರೆ ಅತಿಯಾದ ನೋವಿನಿಂದಾಗಿ ಅವರು ಆಸ್ಪತ್ರೆಗೆ ಬಂದಿದ್ದರು. ಈಕೆಗೆ ಮೂವರು ಹೆಣ್ಣುಮಕ್ಕಳಿದ್ದಾರೆ. ಈಗ ಮತ್ತೆ ಗರ್ಭಿಣಿಯಾಗಿದ್ದು, ಅದು ಕೂಡ ಹೆಣ್ಣು. ಎಕ್ಸರೇ ತೆಗೆದು ನೋಡಿದಾಗ ಸುಮಾರು 2 ಇಂಚಿನ ಸಣ್ಣ ಮೊಳೆಗಳನ್ನು ಹಣೆಗೆ ಹೊಡೆದುಕೊಂಡಿದ್ದಾರೆ. ಅದೃಷ್ಟವಶಾತ್, ಮಹಿಳೆಯ ಮಿದುಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.










