‘ಗಂಧದ ಗುಡಿ’ ಸಿನಿಮಾ ನೋಡಿ ಸುಧಾಮೂರ್ತಿ ಹೇಳಿದ್ದೇನು?

67
firstsuddi

ಪುನೀತ್ ರಾಜ್ ಕುಮಾರ್ ಕನಸಿನ ಗಂಧದ ಗುಡಿ ಸಿನಿಮಾ ಇಂದು ಬೆಳ್ಳಿತೆರೆಯಲ್ಲಿ ರಾರಾಜಿಸಿದೆ. ಬೆಳಗ್ಗೆಯೇ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸ್ಪೆಷಲ್ ಶೋ ಆಯೋಜನೆಗೊಂಡಿದ್ದವು. ಮೊದಲ ಪ್ರದರ್ಶನದಲ್ಲೇ ನೆಚ್ಚಿನ ನಟನ ಚಿತ್ರವನ್ನು ಕಣ್ತುಂಬಿಕೊಂಡ ಅಭಿಮಾನಿಗಳು ಭಾವುಕರಾದರು. ಅಭಿಮಾನಿಗಳ ಜೊತೆಯೇ ಡಾ.ರಾಜ್ ಕುಟುಂಬ ಕೂಡ ಸಿನಿಮಾ ವೀಕ್ಷಿಸಿತು. ಬೆಳಗಿನ ಜಾವ 6 ಗಂಟೆಯಿಂದಲೇ ಸಿನಿಮಾ ಪ್ರದರ್ಶನ ಶುರುವಾಗಿದೆ.

ಸೆಲೆಬ್ರಿಟಿಗಾಗಿ ನಿನ್ನೆ ಗಂಧದ ಗುಡಿ ಸ್ಪೆಷಲ್ ಶೋ ಆಯೋಜನೆ ಮಾಡಲಾಗಿತ್ತು. ಬೆಂಗಳೂರಿನಲ್ಲಿ ಇನ್ಫೋಸಿಸ್ ನ ಸುಧಾ ಮೂರ್ತಿ ಅವರು ಈ ಸಾಕ್ಷ್ಯಚಿತ್ರ ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಕನ್ನಡದಲ್ಲಿ ಇಂಥದ್ದೊಂದು ಸಿನಿಮಾ ಬಂದಿರುವುದು ನೋಡಿ ಗರ್ವ ಬಂತು. ಅವರ ಈ ಪ್ರಯತ್ನಕ್ಕೆ ಫುಲ್ ಮಾರ್ಕ್ಸ್ ಕೊಡುತ್ತೇನೆ ಎಂದು ಹೇಳಿದ್ದಾರೆ.

ಈ ಗಂಧದ ಗುಡಿಯಲ್ಲಿ ಯುವಕರು ನೋಡಿ ತಿಳಿದುಕೊಳ್ಳಬೇಕಾದ ಸಾಕಷ್ಟು ವಿಷಯಗಳು ಇವೆ. ಅದರಲ್ಲೂ ನನ್ನ ಉತ್ತರ ಕರ್ನಾಟಕದ ಬಗ್ಗೆ ತೋರಿಸಿದಾಗ ಮತ್ತು ಪುನೀತ್ ಅವರು ಉತ್ತರ ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತನಾಡಿದಾಗ ನಾನೂ ಭಾವುಕಳಾದೆ. ನಮ್ಮ ನೆಲದ ಚಿತ್ರ ಇದಾಗಿದ್ದರಿಂದ ಹೆಚ್ಚು ಆಪ್ತತೆ ಅನಿಸಿತು ಎಂದು ಸುಧಾಮೂರ್ತಿ ಮಾತನಾಡಿದರು.