ಶ್ರೀನಗರ : ಗಡಿಯಲ್ಲಿ ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪಾಕ್ ಸೈನಿಕರ ಗುಂಡಿನ ದಾಳಿಯಿಂದ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಮೇದಾರ್ ಸೆಕ್ಟರ್ ನ ಅಂತಾರಾಷ್ಟೀಯ ಗಡಿ ಬಳಿ ಗಡಿಯುದ್ಧಕ್ಕೂ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದು, ಗಡಿಯಲ್ಲಿ ಪಾಕ್ ಸೇನೆಯ ಗುಂಡಿನ ದಾಳಿಗೆ ಪ್ರತಿಯಾಗಿ ಭಾರತೀಯ ಯೋಧರು ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿದ್ದಂತೆ ಪಾಕ್ ಸೈನಿಕರು ಗುಂಡಿನ ದಾಳಿ ನಿಲ್ಲಿಸಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.










