ಗಡಿ ವಿಚಾರದಲ್ಲಿ ನಮ್ಮ ನಿಲುವನ್ನು ಅಮಿತ್ ಶಾ ಅವರಿಗೆ ಸ್ಪಷ್ಟಪಡಿಸುತ್ತೇನೆ : ಬೊಮ್ಮಾಯಿ.

50
firstsuddi

ಬೆಂಗಳೂರು : ಗಡಿ ವಿಚಾರದಲ್ಲಿ ನಮ್ಮ ನಿಲುವನ್ನು ಅಮಿತ್ ಶಾ ಅವರಿಗೆ ಸ್ಪಷ್ಟಪಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ದೆಹಲಿಗೆ ಹೋಗುತ್ತಿದ್ದೇನೆ. ಗಡಿ ವಿಚಾರದ ಬಗ್ಗೆ ಅಮಿತ್ ಶಾ ಅವರು ಸಭೆ ಕರೆದಿದ್ದಾರೆ. ನಾನು ಎಲ್ಲ ಸಿದ್ಧತೆಗಳ ಜೊತೆ ಹೋಗುತ್ತಿದ್ದೇನೆ. ಅವಕಾಶ ಸಿಕ್ಕಿದರೆ ಸಂಪುಟ ಬಗ್ಗೆ ಅಮಿತ್ ಶಾ ಅವರ ಜೊತೆ ಚರ್ಚೆ ಮಾಡ್ತೇನೆ ಎಂದರು.

ಮಹಾರಾಷ್ಟ್ರ ಆರು ದಶಕಗಳಿಂದ ಗಡಿ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ನಾವು ಹಾಗಲ್ಲ, ನಮಗೆ ನಮ್ಮ ನೆಲ-ಜಲ-ಗಡಿ ವಿಚಾರ ಮುಖ್ಯ ಎಂದು ಹೇಳಿದರು.

ಒಳಮೀಸಲಾತಿಗೆ ಸಂಪುಟ ಉಪಸಮಿತಿ ರಚನೆ ಕಣ್ಣೊರೆಸುವ ತಂತ್ರ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಒಳಮೀಸಲಾತಿ ಕುರಿತು ನ್ಯಾ.ಸದಾಶಿವ ವರದಿ ಕಡೆ ಐದು ವರ್ಷ ಸಿದ್ದರಾಮಯ್ಯ ತಿರುಗಿ ನೋಡಿರಲಿಲ್ಲ. ಆ ರಿಪೊರ್ಟ್ ಅನ್ನು ತೆಗೆದು ನೋಡುವ ಧೈರ್ಯವಿರಲಿಲ್ಲ. ಇದೇ ಸಮುದಾಯ ಹುಬ್ಬಳಿಯಲ್ಲಿ ಸಮಾವೇಶ ಮಾಡಿತ್ತು. ಆಗ ದೀಪ ಹಚ್ಚಿ ಮಾತ್ರ ಬಂದ್ರು ಸಿದ್ದರಾಮಯ್ಯ. ಅಂಥವರ ಬಗ್ಗೆ ನಾವು ಮಾತನಾಡುವುದಿಲ್ಲ ಎಂದರು.