ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ…

61
firstsuddi

ದೆಹಲಿ: ಜನವರಿ 26ರಂದು ದೆಹಲಿಯ ರಾಜಪಥ್ ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆಅವಕಾಶ ಸಿಕ್ಕಿದೆ. ಕೊನೆ ಕ್ಷಣದಲ್ಲಿ ಕರ್ನಾಟಕದ ‘ನಾರಿ ಶಕ್ತಿ’ ಸ್ತಬ್ಧಚಿತ್ರ ಸೇರ್ಪಡೆಗೊಂಡಿದೆ.

ಈ ಬಾರಿ ಬೇರೆ ರಾಜ್ಯಗಳಿಗೆ ಅವಕಾಶ ನೀಡುವ ದೃಷ್ಟಿಯಿಂದ ಕರ್ನಾಟಕಕ್ಕೆ ಅನುಮತಿ ಇಲ್ಲ ಎಂದು ಟ್ಯಾಬ್ಲೋ ಆಯ್ಕೆ ಸಮಿತಿ ಹೇಳಿತ್ತು. ಸಮಿತಿಯ ನಿರ್ಧಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಈಗ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ.

ಸತತ 13 ವರ್ಷಗಳಿಂದ ಪ್ರದರ್ಶನಗೊಳ್ಳುತ್ತ ಬಂದಿದ್ದ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಈ ವರ್ಷವೂ ಅವಕಾಶ ಸಿಕ್ಕಿದ್ದು, ಸತತ 14ನೇ ಬಾರಿ ರಾಜ್ಯದ ಸ್ತಬ್ಧ ಚಿತ್ರ ಪ್ರದರ್ಶನಗೊಳ್ಳಲಿದೆ.