ನವದೆಹಲಿ : ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರ ಪ್ರದರ್ಶಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು, ಇದರಿಂದ ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವಿನ ಭಿನ್ನಾಭಿಪ್ರಾಯ ಹೆಚ್ಚಾದಂತಿದೆ. ಪಶ್ಚಿಮ ಬಂಗಾಳ ಸರ್ಕಾರದ ಟ್ಯಾಬ್ಲೋ ಪ್ರಸ್ತಾಪವನ್ನು ತಜ್ಞರ ಸಮಿತಿ ಎರಡು ಬಾರಿ ಪರಿಶೀಲನೆ ನಡೆಸಿದ ಬಳಿಕ ಟ್ಯಾಬ್ಲೋ ಪ್ರಸ್ತಾಪವನ್ನು ತಿರಸ್ಕರಿಸಿದೆ. ಈ ಬಾರಿಯ ಗಣರಾಜ್ಯೋತ್ಸವಕ್ಕೆ 16 ರಾಜ್ಯಗಳಿಂದ 22, ಕೇಂದ್ರಾಡಳಿತ ಪ್ರದೇಶ ಹಾಗೂ 6 ಕೇಂದ್ರ ಸಚಿವಾಲಯಗಳ ಒಟ್ಟು 56 ಟ್ಯಾಬ್ಲೋಗಳು ಪ್ರದರ್ಶನಗೊಳ್ಳಲಿದೆ.










