ಬೆಂಗಳೂರು : ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ನಗರದಲ್ಲಿ ಆ.31ರಂದು(ಬುಧವಾರ) ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶ ಹೊರಡಿಸಿದೆ.
ಬಿಬಿಎಂಪಿ ವ್ಯಾಪ್ತಿಯ ಎಲ್ಲ ಕಸಾಯಿಖಾನೆಯಲ್ಲಿ ಪ್ರಾಣಿವಧೆ ನಿಷೇಧ ಅನ್ವಯವಾಗಲಿದೆ. 2022ರ ಆಗಸ್ಟ್ 31ರ ಬುಧವಾರದಂದು ‘ಗಣೇಶ ಚತುರ್ಥಿ’ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಕೃಷ್ಣ ಜನ್ಮಾಷ್ಟಮಿಯಂದು ಕೂಡ ಮಾಂಸ ಮಾರಾಟ ಮತ್ತು ಪ್ರಾಣಿಗಳ ಹತ್ಯೆಯನ್ನು ನಿಷೇಧಿಸಿ ಬಿಬಿಎಂಪಿ ಸುತ್ತೋಲೆ ಹೊರಡಿಸಿತ್ತು.










