ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ಒಂದು ದಶಕದ ಕಾಲ ಬೆಳ್ಳಿ ತೆರೆ ಮೇಲೆ ಮಿಂಚಿದ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಗಣೇಶ ಚತುರ್ಥಿಯ ಶುಭ ದಿನದಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಮೋಹಕತಾರೆ ರಮ್ಯಾ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ತಮ್ಮದೇ ಆಪಲ್ ಬಾಕ್ಸ್ ಸ್ಟುಡಿಯೋಸ್ ಸಂಸ್ಥೆಯನ್ನು ಶುರು ಮಾಡಿದ್ದು, ಈ ಸಂಸ್ಥೆಯ ಮೂಲಕ ಸಿನಿಮಾ ಮಾಡಲಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಚಿತ್ರರಂಗದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುವ ಕಾಲ ಕೂಡಿ ಬಂದಿದ್ದು, ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
Happy Ganesha Habba ♥️
Here’s to new beginnings🤗@StudiosApplebox #AppleBoxStudios pic.twitter.com/or7qx6e6EB— Divya Spandana/Ramya (@divyaspandana) August 31, 2022










