ಗದಗದಲ್ಲಿ ಮೂರು ವರ್ಷದ ಮಗುವಿನಲ್ಲಿ ಕೊರೊನಾ ಸೋಂಕು ತಗುಲಿರುವ ಶಂಕೆ…

185
firstsuddi

ಗದಗ : ಜಿಲ್ಲೆಯಲ್ಲಿ ಮೂರು ವರ್ಷದ ಕಂದಮ್ಮನಲ್ಲಿ ಕೊರೊನಾ ವೈರಸ್ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಜಿಮ್ಸ್ ಆಸ್ಪತ್ರೆಯ ಐಸೊಲೇಷನ್ ವಾರ್ಡ್‍ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಗು ತನ್ನ ತಂದೆ ತಾಯಿಯೊಂದಿಗೆ ಲಂಡನ್‍ನಲ್ಲಿ ನೆಲೆಸಿದ್ದು, ಮಾರ್ಚ್ 9ರಂದು ಲಂಡನ್‍ನಿಂದ ಗದಗಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದರು. ಅವರಲ್ಲಿ ಮೂರು ವರ್ಷದ ಮಗುವಿನಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು, ಗದಗ ಜಿಲ್ಲೆಯ ಜಿಮ್ಸ್ ಆಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡ್‍ಗೆ ದಾಖಲಿಸಿ ಮಗು ಹಾಗೂ ತಂದೆ ತಾಯಿಯ ಗಂಟಲಿನ ದ್ರವದ ಮಾದರಿಯನ್ನು ಬಎಂಗಳೂರು ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು, ಆರೋಗ್ಯ ಇಲಾಖೆಯ ಸೂಚನೆಯ ಮೇರೆಗೆ ಮಗು ಹಾಗೂ ತಂದೆ ತಾಯಿಯ ಮೇಲೆ ನಿಗಾ ವಹಿಸಲಾಗಿದೆ.