ಗದಗ ಉಪ ತಹಶೀಲ್ದಾರ್ ಬಿ.ಎಸ್ ಅಣ್ಣಿಗೇರಿ ನಿವಾಸದ ಮೇಲೆ ಎಸಿಬಿ ದಾಳಿ…

80
firstsuddi

ಗದಗ : ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿರುವ ಆರೋಪದ ಹಿನ್ನೆಲೆ ಇಂದು ಬೆಳಗ್ಗೆ ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪ ತಹಶೀಲ್ದಾರ್ ಬಿ.ಎಸ್ ಅಣ್ಣಿಗೇರಿ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಲ್ಲದೇ ಅಳಿಯನ ಮನೆ ಹಾಗೂ ಖಾಸಗಿ ಕಚೇರಿಯಲ್ಲಿ ಶೋಧ ಮಾಡಲಾಗುತ್ತಿದೆ.

ಜಿಲ್ಲೆಯ ಪಂಚಾಕ್ಷರಿ ನಗರದಲ್ಲಿರುವ ಸ್ವಂತ ಮನೆಯಲ್ಲಿ ಸುಮಾರು 500ಗ್ರಾಂ ಚಿನ್ನಾಭರಣ, ಐದು ಕೆಜಿ ಬೆಳ್ಳಿಯ ಆಭರಣಗಳು, 15 ಸೈಟ್ ಗಳು ಮತ್ತು 30ಕ್ಕಿಂತ ಹೆಚ್ಚು ಎಕರೆ ಜಮೀನು ದಾಖಲೆ ಲಭ್ಯವಾಗಿದ್ದು, ಅಣ್ಣಿಗೇರಿ ಅವರ ಪತ್ನಿ ಮತ್ತು ಅಳಿಯನ ಹೆಸರಿನಲ್ಲಿಯೂ ಆಸ್ತಿ ದಾಖಲೆಗಳು ಲಭ್ಯವಾಗಿವೆ ಎಂದು ತಿಳಿದು ಬಂದಿದೆ.

ಸದ್ಯ ಕಚೇರಿಯಲ್ಲಿನ ಕಡತಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಜೊತೆಗೆ ಅಳಿಯ ರಾಕೇಶ್ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.